Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:9 - ಕನ್ನಡ ಸಮಕಾಲಿಕ ಅನುವಾದ

9 ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಪಾತ್ರೆ ನಿಮ್ಮ ಸೇವಕರಾದ ನಮ್ಮಲ್ಲಿ ಯಾರಾದರ ಬಳಿ ಸಿಕ್ಕಿದ್ದಾದರೆ ಅವನಿಗೆ ಮರಣದಂಡನೆ ಆಗಲಿ! ಅದುಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಊಳಿಗದವರಾಗುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ ಅವನು ಮರಣದಂಡನೆಯನ್ನು ಹೊಂದಲಿ; ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ದಾಸರಾಗುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ಆ ವ್ಯಕ್ತಿಯು ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:9
7 ತಿಳಿವುಗಳ ಹೋಲಿಕೆ  

ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳು ಸಿಕ್ಕುವುವೋ ಅವರು ಸಾಯಲಿ. ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ, ನಮ್ಮ ಬಂಧುಗಳ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ,” ಎಂದನು. ಆದರೆ ರಾಹೇಲಳು ಅವುಗಳನ್ನು ಕದ್ದುಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.


ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.


ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.


ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.


ಆಗ ಅವನು, “ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ, ಅವನು ನನಗೆ ದಾಸನಾಗಿರಲಿ, ಆದರೆ ನೀವು ನಿರಪರಾಧಿಗಳಾಗಿರುವಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು