Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:11 - ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಬರಗಾಲ ತೀರುವದಕ್ಕೆ ಇನ್ನೂ ಐದು ವರುಷ ಹೋಗಬೇಕು; ಆದದರಿಂದ ನಿನಗೂ ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು ಹೇಳುತ್ತಾನೆಂಬದಾಗಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲಿ ನಿನ್ನ ಕುಟುಂಬದವರಿಗಾಗಲಿ ಬಡತನವಿರುವುದಿಲ್ಲ’ ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:11
8 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ತಂದೆಯನ್ನೂ, ತನ್ನ ಸಹೋದರರನ್ನೂ, ತನ್ನ ತಂದೆಯ ಮನೆಯವರೆಲ್ಲರನ್ನೂ ಅವರ ಮಕ್ಕಳ ಲೆಕ್ಕದ ಪ್ರಕಾರ ಆಹಾರಕೊಟ್ಟು, ಅವರನ್ನು ಸಂರಕ್ಷಿಸಿದನು.


ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.


ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.


“ನಿಮ್ಮ ಸಂಗಡ ಮಾತನಾಡುವುದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ, ನನ್ನ ಸಹೋದರ ಬೆನ್ಯಾಮೀನನ ಕಣ್ಣುಗಳೂ ನೋಡಿವೆ.


ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು.


ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು