Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:15 - ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ತನ್ನ ಸಹೋದರರಿಗೆಲ್ಲಾ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟನು. ತರುವಾಯ ಅವರು ಅವನ ಸಂಗಡ ಮಾತನಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಮೇಲೆ ಯೋಸೇಫನು ತನ್ನ ಎಲ್ಲಾ ಸಹೋದರರಿಗೂ ಮುದ್ದಿಟ್ಟು ಅತ್ತನು. ಇದಾದ ಮೇಲೆ ಆ ಸಹೋದರರು ಅವನೊಂದಿಗೆ ಮಾತಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:15
17 ತಿಳಿವುಗಳ ಹೋಲಿಕೆ  

ಎದ್ದು ತನ್ನ ತಂದೆಯ ಬಳಿಗೆ ಹೋದನು. “ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ, ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು, ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.


ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.


ನನ್ನ ಕಣ್ಣುಗಳನ್ನು ಮುಚ್ಚದಿರುವಾಗ, ನಾನು ಮಾತನಾಡಲಾರದಂತೆ ಕಳವಳಪಟ್ಟೆನು.


ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ, ಅರಸನು ಅಬ್ಷಾಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರಮಾಡಿದನು. ಆಗ ಅರಸನು ಅಬ್ಷಾಲೋಮನಿಗೆ ಮುದ್ದಿಟ್ಟನು.


ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಆಗ ಅವರು ತಿರುಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಾ ತನ್ನ ಅತ್ತೆಯನ್ನು ಮುದ್ದಿಟ್ಟು ಹೊರಟು ಹೋದಳು; ಆದರೆ ರೂತಳು ಅತ್ತೆಯನ್ನು ಅಂಟಿಕೊಂಡಳು.


ನೀವು ಮದುವೆಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದುವಂತೆ, ಯೆಹೋವ ದೇವರು ಆಶೀರ್ವದಿಸಲಿ,” ಎಂದು ಹೇಳಿದಳು. ನಂತರ ನೊವೊಮಿಯು ಅವರಿಗೆ ಮುದ್ದಿಟ್ಟಳು.


ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ, ಹೊರಗಿದ್ದ ಈಜಿಪ್ಟಿನವರೂ, ಫರೋಹನ ಮನೆಯವರೂ ಕೇಳಿಸಿಕೊಂಡರು.


ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.


ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.


ಆಗ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು, ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.


ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.


ಅವನು ತನ್ನ ತಮ್ಮ ಬೆನ್ಯಾಮೀನನ ಕುತ್ತಿಗೆಯನ್ನು ಅಪ್ಪಿಕೊಂಡು ಅತ್ತನು, ಬೆನ್ಯಾಮೀನನೂ ಅತ್ತನು.


ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.


ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು