ಆದಿಕಾಂಡ 45:19 - ಕನ್ನಡ ಸಮಕಾಲಿಕ ಅನುವಾದ19 “ಇದನ್ನು ಸಹ ನಿನ್ನ ಸಹೋದರರು ಹೇಳುವಂತೆ ನಿನಗೆ ಅಪ್ಪಣೆಯಾಗಿದೆ: ‘ಈಜಿಪ್ಟ್ ದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ, ಹೆಂಡತಿಯರಿಗಾಗಿಯೂ ಬಂಡಿಗಳನ್ನು ತೆಗೆದುಕೊಂಡುಹೋಗಿ, ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ. ಅಧ್ಯಾಯವನ್ನು ನೋಡಿ |