Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:20 - ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಈಜಿಪ್ಟ್ ದೇಶದಲ್ಲಿರುವ ಉತ್ತಮವಾದದ್ದೆಲ್ಲಾ ನಿಮ್ಮದೇ,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಚಿಂತಿಸಬೇಕಾಗಿಲ್ಲ. ಈಜಿಪ್ಟ್ ದೇಶದ ಅತ್ಯುತ್ತಮವಾದುವುಗಳು ನಿಮ್ಮದಾಗುವುವು'."

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಐಗುಪ್ತದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮ ಪಾಲಿಗೆ ಬಂದದರಿಂದ ನಿಮಗಿರುವ ಸೊತ್ತಿನ ವಿಷಯ ಚಿಂತೆಪಡಬೇಕಾದ ಅವಶ್ಯವಿಲ್ಲ ಎಂಬದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರ ಸ್ವತ್ತುಗಳ ಬಗ್ಗೆ ಚಿಂತಿಸುವುದು ಬೇಡ; ಈಜಿಪ್ಟಿನಲ್ಲಿ ನಮಗಿರುವ ಉತ್ತಮವಾದವುಗಳನ್ನು ಅವರಿಗೆ ಕೊಡೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:20
23 ತಿಳಿವುಗಳ ಹೋಲಿಕೆ  

ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು, ಮನೆಯಲ್ಲಿದ್ದ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬರಬಾರದು. ಹಾಗೆಯೇ, ಹೊಲದಲ್ಲಿದ್ದವನು ಹಿಂದಿರುಗಿ ಬರಬಾರದು.


ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು. ನಾನು ಅವರನ್ನು ಮರುಭೂಮಿಯಲ್ಲಿ ಅಂತ್ಯಗೊಳಿಸಲಿಲ್ಲ.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ,


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ಅವರ ಬಿಲ್ಲುಗಳು ಸಹ ಯುವಕರನ್ನು ಸಂಹರಿಸುವುವು. ಇವರು ಹಸುಳೆಗಳನ್ನು ಕರುಣಿಸರು. ಇವರು ಮಕ್ಕಳನ್ನು ಕನಿಕರಿಸುವುದಿಲ್ಲ.


ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ?


ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.


ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.


ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು.


ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.


ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.


ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.


“ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ, ವಸ್ತುಗಳನ್ನಾಗಲಿ ಇಟ್ಟುಕೊಳ್ಳುವುದಕ್ಕೆ ಕೊಟ್ಟಾಗ, ಅದು ಅವನ ಮನೆಯಿಂದ ಕಳ್ಳತನವಾದರೆ, ಕಳ್ಳತನ ಮಾಡಿದವನು ಸಿಕ್ಕಿದರೆ, ಅವನು ಎರಡರಷ್ಟು ಕೊಡಬೇಕು.


ನಿಮ್ಮ ತಂದೆಯನ್ನೂ, ಕುಟುಂಬದವರನ್ನೂ ಕರೆದುಕೊಂಡು ನನ್ನ ಬಳಿಗೆ ಬನ್ನಿರಿ. ಈಜಿಪ್ಟ್ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.’


ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವುದಕ್ಕೆ ಕೆಳಗೆ ಇಳಿಯದಿರಲಿ.


ಅಬೀಮೆಲೆಕನು, “ನನ್ನ ದೇಶವು ನಿನ್ನ ಮುಂದೆ ಇದೆ, ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು,” ಎಂದನು.


“ಇದನ್ನು ಸಹ ನಿನ್ನ ಸಹೋದರರು ಹೇಳುವಂತೆ ನಿನಗೆ ಅಪ್ಪಣೆಯಾಗಿದೆ: ‘ಈಜಿಪ್ಟ್ ದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ, ಹೆಂಡತಿಯರಿಗಾಗಿಯೂ ಬಂಡಿಗಳನ್ನು ತೆಗೆದುಕೊಂಡುಹೋಗಿ, ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.


ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು.


ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು