ಆದಿಕಾಂಡ 45:23 - ಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಈಜಿಪ್ಟಿನ ಶ್ರೇಷ್ಠವಾದವುಗಳನ್ನೂ, ಪ್ರಯಾಣಕ್ಕೋಸ್ಕರ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿ, ರೊಟ್ಟಿ, ಆಹಾರಗಳನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ತನ್ನ ತಂದೆಗೆ ಈಜಿಪ್ಟ್ ದೇಶದ ಒಳ್ಳೊಳ್ಳೆಯ ವಸ್ತುಗಳನ್ನೂ ಹತ್ತು ಗಂಡು ಕತ್ತೆಗಳ ಮೇಲೆ ಹೇರಿಸಿದನು. ಅವನ ಪ್ರಯಾಣಕ್ಕೆ ಹತ್ತು ಹೆಣ್ಣು ಕತ್ತೆಗಳ ಮೇಲೆ ದವಸಧಾನ್ಯಗಳನ್ನೂ ಇತರ ಆಹಾರಪದಾರ್ಥಗಳನ್ನೂ ಕಳಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ತನ್ನ ತಂದೆಗೋಸ್ಕರ ಐಗುಪ್ತದೇಶದ ಒಳ್ಳೇ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಯ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನೂ ಬೇರೆ ತಿನ್ನುವ ಪದಾರ್ಥಗಳನ್ನೂ ಕಟ್ಟಿಸಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೋಸೇಫನು ತನ್ನ ತಂದೆಗೂ ಉಡುಗೊರೆಗಳನ್ನು ಕಳುಹಿಸಿದನು. ಅವನು ಈಜಿಪ್ಟಿನ ಶ್ರೇಷ್ಠವಾದ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಕಳುಹಿಸಿದನು. ತನ್ನ ತಂದೆಯ ಮರುಪ್ರಯಾಣಕ್ಕೆ ಬೇಕಾದ ಕಾಳು, ರೊಟ್ಟಿ ಮತ್ತು ಇತರ ಆಹಾರಪದಾರ್ಥಗಳನ್ನೂ ಹತ್ತು ಹೆಣ್ಣುಕತ್ತೆಗಳ ಮೇಲೆ ಹೊರಿಸಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |