Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:26 - ಕನ್ನಡ ಸಮಕಾಲಿಕ ಅನುವಾದ

26 “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:26
17 ತಿಳಿವುಗಳ ಹೋಲಿಕೆ  

ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರುವಾಗ ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದರು.


ಅಲ್ಲಿದ್ದವರು, “ಇದು ನಿಜವೇ! ಕರ್ತದೇವರು ಜೀವಂತರಾಗಿ ಎದ್ದಿದ್ದಾರೆ ಮತ್ತು ಸೀಮೋನನಿಗೆ ಕಾಣಿಸಿಕೊಂಡಿದ್ದಾರೆ,” ಎಂದು ಹೇಳಿದರು.


ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.


“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.


ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.


ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ,


ನಾನು ಅವರನ್ನು ನೋಡಿ ಮುಗುಳ್ನಗಿದಾಗ, ಅವರು ಅದನ್ನು ನಂಬಲಿಲ್ಲ; ನನ್ನ ಮುಖದ ಕಾಂತಿ ಅವರಿಗೆ ಅಮೂಲ್ಯವಾಗಿತ್ತು.


ನಾನು ಕರೆಯಲು ದೇವರು ನನಗೆ ಉತ್ತರ ಕೊಟ್ಟರೂ, ನನ್ನ ವಿಜ್ಞಾಪನೆಗೆ ದೇವರು ಕಿವಿಗೊಡುವರೆಂದು ನಾನು ನಂಬುತ್ತಿರಲಿಲ್ಲ.


ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.


ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.


ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು, ಒಂದು ಹೋತವನ್ನು ಕೊಯ್ದು, ಆ ಅಂಗಿಯನ್ನು ರಕ್ತದಲ್ಲಿ ಅದ್ದಿ,


ಅವರು ಈಜಿಪ್ಟಿನಿಂದ ಹೊರಟುಹೋಗಿ ಕಾನಾನಿನಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದು,


ಅವರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದಾಗ, ತಮಗೆ ಸಂಭವಿಸಿದ್ದೆಲ್ಲವನ್ನೂ ಅವನಿಗೆ ತಿಳಿಸಿದರು.


ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು