Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:6 - ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಈ ಎರಡು ವರ್ಷಗಳವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರ್ಷಗಳವರೆಗೆ ಬಿತ್ತುವುದೂ, ಕೊಯ್ಯುವುದೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:6
13 ತಿಳಿವುಗಳ ಹೋಲಿಕೆ  

ಯೋಸೇಫನು ಜನರಿಗೆ, “ಇಂದು ನಿಮ್ಮನ್ನೂ, ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜ ಬಿತ್ತಿರಿ.


ಈಜಿಪ್ಟಿನಲ್ಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಈಜಿಪ್ಟಿನವರಿಗೆ ಮಾರಿದನು. ಆಗ ಬರವು ಈಜಿಪ್ಟ್ ದೇಶದಲ್ಲಿ ಕಠಿಣವಾಗಿತ್ತು.


ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.


ಹೊಲಗೆಯ್ಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.


ಅವನು ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿಗಳಾಗಿಯೂ, ತನ್ನ ಭೂಮಿಯನ್ನು ಊಳುವವರಾಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ಹಾಗು ತನ್ನ ರಥಸಾಮಗ್ರಿಗಳನ್ನು ಮಾಡುವವರಾಗಿಯೂ ನೇಮಿಸುವನು.


ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು.


“ಆರು ದಿನಗಳು ಕೆಲಸಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು.


ಆ ವರ್ಷವಾದ ಮೇಲೆ ಮಾರನೆಯ ವರ್ಷದಲ್ಲಿ, ಅವರು ಅವನ ಬಳಿಗೆ ಬಂದು ಅವನಿಗೆ, “ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವುದರಿಂದ, ನಮ್ಮ ಶರೀರಗಳೂ, ನಮ್ಮ ಭೂಮಿಯೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬುದನ್ನು ನಮ್ಮ ಒಡೆಯನಿಗೆ ಮರೆಮಾಡದೆ ತಿಳಿಸುತ್ತಿದ್ದೇವೆ.


ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.


ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು.


ಈಜಿಪ್ಟ್ ದೇಶದಲ್ಲಿದ್ದ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ,


ಅಧಿಕಾರಿಗಳು ಮುಂಬರುವ ಈ ಒಳ್ಳೆಯ ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು