Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:9 - ಕನ್ನಡ ಸಮಕಾಲಿಕ ಅನುವಾದ

9 ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ, ‘ನಿನ್ನ ಮಗ ಯೋಸೇಫನನ್ನು ದೇವರು ಈಜಿಪ್ಟಿಗೆಲ್ಲಾ ಪ್ರಭುವನ್ನಾಗಿ ಮಾಡಿದ್ದಾರೆ, ತಡಮಾಡದೆ ನನ್ನ ಬಳಿಗೆ ಬೇಗ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀವು ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವರಿಗೆ, ‘ನಿಮ್ಮ ಮಗ ಜೋಸೆಫ್ ಹೀಗೆನ್ನುತ್ತಾನೆ; ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದಾರೆ. ನೀವು ತಡಮಾಡದೆ ನನ್ನ ಬಳಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ನಿನ್ನ ಮಗನಾದ ಯೋಸೇಫನು ಹೀಗನ್ನುತ್ತಾನೆ - ದೇವರು ನನ್ನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇವಿುಸಿದ್ದಾನೆ; ನೀನು ತಡಮಾಡದೆ ನನ್ನ ಬಳಿಗೆ ಬಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಈ ಸಂದೇಶವನ್ನು ಕಳುಹಿಸಿದ್ದಾನೆ: ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ. ತಡಮಾಡದೆ ನನ್ನ ಬಳಿಗೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:9
4 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ಈಜಿಪ್ಟ್ ದೇಶದಲ್ಲಿ ನನಗಿರುವ ಎಲ್ಲಾ ಘನತೆಯನ್ನೂ, ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ,” ಎಂದನು.


ಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು.


ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು