Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:12 - ಕನ್ನಡ ಸಮಕಾಲಿಕ ಅನುವಾದ

12 ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೂದನ ಮಕ್ಕಳಾದ ಏರ್ ಓನಾನ್ ಶೇಲಾಹ ಪೆರೆಚ್‍ಜೆರಹ (ಇವರಲ್ಲಿ ಏರ್ ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತರು);

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್ ಮತ್ತು ಜೆರಹ. (ಏರ್ ಮತ್ತು ಓನಾನ್ ಕಾನಾನಿನಲ್ಲಿ ಇರುವಾಗಲೇ ಸತ್ತುಹೋದರು.) ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:12
29 ತಿಳಿವುಗಳ ಹೋಲಿಕೆ  

ಯೆಹೂದನ ಮಗ ಶೇಲಹನ ಪುತ್ರರು: ಲೇಕಾಹ್ಯನ ತಂದೆ ಏರನು, ಮಾರೇಷನ ತಂದೆ ಲದ್ದ; ಬೇತ್ ಅಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳವರು,


ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.


ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.


ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.


ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು,


ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,


ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಹೋಗಲಿ; ನಾನು ಆ ದೇಶವನ್ನು ಇವರ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ,” ಎಂದರು.


ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: “ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.”


ಯೆಹೂದ ಗೋತ್ರದಿಂದ ಅಮ್ಮೀನಾದಾಬನ ಮಗ ನಹಶೋನ್,


ಆಕೆಯು ತಿರುಗಿ ಗರ್ಭಿಣಿಯಾಗಿ ಮಗನನ್ನು ಹೆತ್ತು, ಅವನಿಗೆ ಓನಾನ್ ಎಂದು ಹೆಸರಿಟ್ಟಳು.


ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.


ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್ ಮತ್ತು ಶಿಮ್ರೋನ್ ಎಂಬುವರು.


ಈ ಹುಡುಗಿಯಿಂದ ಯೆಹೋವ ದೇವರು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯು ತಾಮಾರಳು ಯೆಹೂದನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ,” ಎಂದರು.


ಯೆಹೂದನ ಮಗನಾದ ಪೆರೆಚನ ಮಕ್ಕಳಲ್ಲಿ ಒಬ್ಬನಾದ ಬಾನೀಯ ಮಗನಾದ ಇಮ್ರಿಯು, ಇವನ ಮಗನಾದ ಒಮ್ರಿ, ಇವನ ಮಗನು ಅಮ್ಮೀಹೂದನು, ಇವನ ಮಗನು ಉತೈ.


ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು, ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ, ಯೆಹೂದನು ಕೆಜೀಬಿನಲ್ಲಿ ಇದ್ದನು.


ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು.


ಜೆರಹನ ಪುತ್ರರಲ್ಲಿ ಯೆಯೂವೇಲನೂ, ಅವನ ಸಹೋದರರೂ 690 ಮಂದಿ.


ಯೆಹೂದನ ಮಗ ಜೆರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಪ್ರತಿನಿಧಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು