ಆದಿಕಾಂಡ 46:15 - ಕನ್ನಡ ಸಮಕಾಲಿಕ ಅನುವಾದ15 ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ, ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಪುತ್ರಪುತ್ರಿಯರೆಲ್ಲಾ ಸೇರಿ ಒಟ್ಟು ಮೂವತ್ತು ಮೂರು ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇವರೆಲ್ಲರು ಲೇಯಳ ಸಂತತಿಯವರು. ಆಕೆ ಯಕೋಬನಿಗೆ ಇವರನ್ನಲ್ಲದೆ ದೀನಳೆಂಬ ಮಗಳನ್ನೂ ಮೆಸಪೊಟೇಮಿಯಾದಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಒಟ್ಟು ಮೂವತ್ತು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಕೆಯು ಯಾಕೋಬನಿಗೆ ಇವರನ್ನೂ ದೀನಳೆಂಬ ಹೆಣ್ಣುಮಗಳನ್ನೂ ಪದ್ದನ್ಅರಾವಿುನಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್. ಇವರು ಯಾಕೋಬನ ಹೆಂಡತಿಯಾದ ಲೇಯಳ ಮಕ್ಕಳು. ಲೇಯಳು ಆ ಮಕ್ಕಳಿಗೆ ಪದ್ದನ್‌ಅರಾಮಿನಲ್ಲಿ ಜನ್ಮಕೊಟ್ಟಳು. ಅಲ್ಲಿ ಅವಳ ಮಗಳಾದ ದೀನ ಸಹ ಜನಿಸಿದಳು. ಈ ಕುಟುಂಬದಲ್ಲಿ ಮೂವತ್ಮೂರು ಮಂದಿ ಇದ್ದರು. ಅಧ್ಯಾಯವನ್ನು ನೋಡಿ |