Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:20 - ಕನ್ನಡ ಸಮಕಾಲಿಕ ಅನುವಾದ

20 ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಈಜಿಪ್ಟಿನಲ್ಲಿ ಜೋಸೆಫನಿಗೆ ಓನ್ ಪಟ್ಟಣದ ಆಚಾರ್ಯ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಮತ್ತು ಎಫ್ರಯಿಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಐಗುಪ್ತದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಆಚಾರ್ಯನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಎಫ್ರಾಯೀಮ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಮನಸ್ಸೆ ಮತ್ತು ಎಫ್ರಾಯೀಮ್. (ಯೋಸೇಫನ ಹೆಂಡತಿ “ಆಸನತ್” ಈಕೆ ಓನ್ ಪಟ್ಟಣದ ಆಚಾರ್ಯನಾಗಿದ್ದ ಫೋಟೀಫರನ ಮಗಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:20
15 ತಿಳಿವುಗಳ ಹೋಲಿಕೆ  

ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವದಿಸಿ, ಹೀಗೆಂದನು: “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಈ ಆಶೀರ್ವಾದವನ್ನು ಹೇಳುವರು: ‘ಎಫ್ರಾಯೀಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲಿ.’ ” ಹೀಗೆ ಹೇಳುತ್ತಾ ಯಾಕೋಬನು ಎಫ್ರಾಯೀಮನಿಗೆ ಮನಸ್ಸೆಗಿಂತಲೂ ಉನ್ನತಸ್ಥಾನವನ್ನು ಕೊಟ್ಟನು.


ಯಾಕೋಬನ ಹೆಂಡತಿಯಾದ ರಾಹೇಲಳ ಪುತ್ರರು: ಯೋಸೇಫ್, ಬೆನ್ಯಾಮೀನ್ ಎಂಬುವರು.


ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.


ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.


ಓನಿನ ಮತ್ತು ಪಿಬೇಸೆತಿನ ಯೌವನಸ್ಥರು ಖಡ್ಗದಿಂದ ಸಾಯುವರು. ಈ ಪಟ್ಟಣಗಳ ನಿವಾಸಿಗಳು ತಾವಾಗಿಯೇ ಸೆರೆಯಾಗಿ ಹೋಗುವುವು.


ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು