Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:3 - ಕನ್ನಡ ಸಮಕಾಲಿಕ ಅನುವಾದ

3 ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:3
24 ತಿಳಿವುಗಳ ಹೋಲಿಕೆ  

ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.


ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಿದ್ದಾರೆ. ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.


ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು.


ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.


ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ಆದರೆ ಈಜಿಪ್ಟನವರು ಅವರನ್ನು ಎಷ್ಟು ಶ್ರಮಪಡಿಸಿದರೋ, ಅಷ್ಟು ಅಧಿಕವಾಗಿ ಅವರು ಹೆಚ್ಚಿ ಹರಡಿಕೊಂಡದ್ದರಿಂದ ಈಜಿಪ್ಟಿನವರು ಇಸ್ರಾಯೇಲರ ಬಗ್ಗೆ ಹೆದರಿದವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು