Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:34 - ಕನ್ನಡ ಸಮಕಾಲಿಕ ಅನುವಾದ

34 ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:34
17 ತಿಳಿವುಗಳ ಹೋಲಿಕೆ  

ಆದರೆ ಮೋಶೆಯು ಫರೋಹನಿಗೆ, “ಹಾಗೆ ಮಾಡುವುದು ಯುಕ್ತವಲ್ಲ. ಏಕೆಂದರೆ ನಮ್ಮ ಯೆಹೋವ ದೇವರಾದ ದೇವರಿಗೆ ಯಜ್ಞವನ್ನರ್ಪಿಸುವುದು ಈಜಿಪ್ಟಿನವರಿಗೆ ಅಸಹ್ಯವಾಗಿರುವುದು. ಈಜಿಪ್ಟಿನವರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಅರ್ಪಿಸಿದರೆ, ಅವರು ನಮ್ಮ ಮೇಲೆ ಕಲ್ಲೆಸೆದಾರು.


ಆಗ ಅವರು ಯೋಸೇಫನಿಗೆ, ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಈಜಿಪ್ಟಿನವರಿಗೂ ಬೇರೆಬೇರೆಯಾಗಿ ಊಟಕ್ಕೆ ಇಟ್ಟರು. ಏಕೆಂದರೆ ಈಜಿಪ್ಟಿನವರು ಹಿಬ್ರಿಯರ ಕೂಡ ಊಟಮಾಡುತ್ತಿರಲಿಲ್ಲ. ಅದು ಈಜಿಪ್ಟಿನವರಿಗೆ ಅಸಹ್ಯವಾಗಿತ್ತು.


ಅವರು ಕುರಿಕಾಯುವವರು, ಅವರಿಗೆ ಪಶುಗಳು ಇವೆ. ತಮ್ಮ ಕುರಿದನಗಳನ್ನೂ, ತಮಗಿದ್ದದ್ದೆಲ್ಲವನ್ನೂ ತೆಗೆದುಕೊಂಡು ಬಂದಿದ್ದಾರೆ, ಎಂದು ಹೇಳುವೆನು.


ಅವನ ಸಹೋದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವುದಕ್ಕೆ ಹೋದರು.


ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.


ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಂದು ಬಣ್ಣವಿದ್ದವುಗಳನ್ನೂ ವಿಂಗಡಿಸಿ, ತನ್ನ ಪುತ್ರರ ಕೈಗೆ ಕೊಟ್ಟನು.


ಯಾಕೋಬನು ತನ್ನ ಮಗಳಾದ ದೀನಳನ್ನು ಶೆಕೆಮನು ಕೆಡಿಸಿದ್ದಾನೆಂದು ಕೇಳಿದಾಗ, ಅವನ ಮಕ್ಕಳು ಅವನ ಪಶುಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವವರೆಗೆ ಯಾಕೋಬನು ಸುಮ್ಮನಿದ್ದನು.


ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.


ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.


ಗೆರಾರಿನ ಮಂದೆಯನ್ನು ಮೇಯಿಸುವವರು, “ಈ ನೀರು ನಮ್ಮದು,” ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ, ಏಸೆಕ್, ಎಂದು ಹೆಸರಿಟ್ಟನು.


ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.


ನಿಮ್ಮ ತಂದೆಯನ್ನೂ, ಕುಟುಂಬದವರನ್ನೂ ಕರೆದುಕೊಂಡು ನನ್ನ ಬಳಿಗೆ ಬನ್ನಿರಿ. ಈಜಿಪ್ಟ್ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.’


ಫರೋಹನು ಯೋಸೇಫನ ಸಹೋದರರಿಗೆ, “ನಿಮ್ಮ ಕೆಲಸವೇನು?” ಎಂದು ಕೇಳಿದನು. ಅವರು ಫರೋಹನಿಗೆ, “ನಿನ್ನ ದಾಸರಾದ ನಾವೂ, ನಮ್ಮ ತಂದೆಯವರೂ ಕುರಿಕಾಯುವವರಾಗಿದ್ದೇವೆ.


ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.


ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.


ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.


“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು