Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:7 - ಕನ್ನಡ ಸಮಕಾಲಿಕ ಅನುವಾದ

7 ಅವನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮೊಕ್ಕಳನ್ನೂ, ಅಂತೂ ತನ್ನ ಇಡೀ ಕುಟುಂಬದವರೆಲ್ಲರನ್ನೂ ತನ್ನೊಂದಿಗೆ ಈಜಿಪ್ಟಿಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಮನೆತನದವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತದೇಶಕ್ಕೆ ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನ ಜೊತೆಯಲ್ಲಿ ಅವನ ಗಂಡುಮಕ್ಕಳು, ಹೆಣ್ಣುಮಕ್ಕಳು ಮತ್ತು ಮೊಮ್ಮಕ್ಕಳು ಇದ್ದರು. ಅವನ ಸಂಸಾರದವರೆಲ್ಲ ಅವನ ಜೊತೆ ಈಜಿಪ್ಟಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:7
9 ತಿಳಿವುಗಳ ಹೋಲಿಕೆ  

ಅವರು ತಮ್ಮ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತೆಗೆದುಕೊಂಡು ಈಜಿಪ್ಟಿಗೆ ಬಂದರು. ಯಾಕೋಬನು ತನ್ನ ಕುಟುಂಬ ಸಮೇತವಾಗಿ ಬಂದನು.


ಈಜಿಪ್ಟಿಗೆ ಬಂದ ಇಸ್ರಾಯೇಲರ ಮಕ್ಕಳು ಎಂದರೆ, ಯಾಕೋಬನ ಹಾಗೂ ಅವನ ಸಂತತಿಯರ ಹೆಸರುಗಳು: ಯಾಕೋಬನ ಚೊಚ್ಚಲ ಮಗ ರೂಬೇನನು.


ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.


ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.


ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು.


ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ.


ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.


ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.


ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವುದಕ್ಕೆ ಈಜಿಪ್ಟಿಗೆ ಹೋದರು. ಅಸ್ಸೀರಿಯದವರು ಕಾರಣವಿಲ್ಲದೆ ಅವರಿಗೆ ಬಾಧೆಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು