Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:1 - ಕನ್ನಡ ಸಮಕಾಲಿಕ ಅನುವಾದ

1 ಯೋಸೇಫನು ಹೋಗಿ ಫರೋಹನಿಗೆ, “ನನ್ನ ತಂದೆಯೂ, ನನ್ನ ಸಹೋದರರೂ ತಮ್ಮ ಕುರಿದನಗಳನ್ನೂ, ತಮಗಿದ್ದ ಎಲ್ಲವುಗಳನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದಿದ್ದಾರೆ. ಅವರು ಗೋಷೆನ್ ಪ್ರಾಂತದಲ್ಲಿ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್‌ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋಸೆಫನು ಫರೋಹನ ಬಳಿಗೆ ಬಂದು, “ನನ್ನ ತಂದೆಯೂ ಸಹೋದರರೂ ದನಕುರಿಗಳನ್ನು ಹಾಗೂ ಎಲ್ಲ ಆಸ್ತಿಪಾಸ್ತಿಯನ್ನು ತೆಗೆದುಕೊಂಡು ಕಾನಾನ್ ನಾಡಿನಿಂದ ಗೋಷೆನ್ ಪ್ರಾಂತ್ಯಕ್ಕೆ ಬಂದಿದ್ದಾರೆ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ - ನನ್ನ ತಂದೆಯೂ ಅಣ್ಣತಮ್ಮಂದಿರೂ ದನಕುರಿಗಳನ್ನೂ ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿದ್ದಾರೆಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:1
8 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ಸಹೋದರರಿಗೂ, ತನ್ನ ತಂದೆಯ ಮನೆಯವರಿಗೂ, “ನಾನು ಹೋಗಿ ಫರೋಹನಿಗೆ, ಕಾನಾನ್ ದೇಶದಲ್ಲಿದ್ದ ನನ್ನ ಸಹೋದರರೂ, ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.


ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.


ಇದಲ್ಲದೆ ಗೋಷೆನ್ ಪ್ರಾಂತಕ್ಕೆ ಮಾರ್ಗವನ್ನು ತೋರಿಸುವಂತೆ ಯಾಕೋಬನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಪ್ರಾಂತಕ್ಕೆ ಬಂದು ಸೇರಿದರು.


ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,


ಇಸ್ರಾಯೇಲರು ಇದ್ದ ಗೋಷೆನ್ ಪ್ರಾಂತದಲ್ಲಿ ಆಲಿಕಲ್ಲಿನ ಮಳೆಯು ಇರಲಿಲ್ಲ.


“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.


ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.


ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು