Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ, ಅವನಿಂದ ಬೀಳ್ಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಫರೋಹನನ್ನು ಆಶೀರ್ವದಿಸಿ, ಅವನ ಸನ್ನಿಧಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯಾಕೋಬನು ಫರೋಹನನ್ನು ಆಶೀರ್ವದಿಸಿದ ಬಳಿಕ ಫರೋಹನ ಸನ್ನಿಧಿಯಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:10
12 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ತಂದೆ ಯಾಕೋಬನನ್ನು ಕರೆದುಕೊಂಡು ಬಂದು, ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ದೊಡ್ಡವನು ಎಂಬುದರಲ್ಲಿ ವಿವಾದವಿಲ್ಲ.


“ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ; ಯೆಹೋವ ದೇವರು ಹೆಸರಿನಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ,” ಎಂದು ಹಾದುಹೋಗುವವರು ಹೇಳದಿರಲಿ.


ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.


ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.


ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:


ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ.


ಅರಸರ ಮುಂದೆ ನಿಮ್ಮ ಶಾಸನಗಳನ್ನು ಮಾತಾಡುವೆನು, ಅವುಗಳ ಬಗ್ಗೆ ನಾನೆಂದೂ ನಾಚಿಕೆಪಡುವುದಿಲ್ಲ.


ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.


ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.


ಆಗ ಯೆಹೋಶುವನು ಯೆಫುನ್ನೆಯ ಮಗ ಕಾಲೇಬನನ್ನು ಆಶೀರ್ವದಿಸಿ, ಅವನಿಗೆ ಹೆಬ್ರೋನನ್ನು ಸೊತ್ತಾಗಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು