Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:13 - ಕನ್ನಡ ಸಮಕಾಲಿಕ ಅನುವಾದ

13 ಆದರೆ ಬರವು ಅತಿ ಘೋರವಾಗಿದ್ದದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಈಜಿಪ್ಟ್ ದೇಶವೂ, ಕಾನಾನ್ ದೇಶವೂ ಕ್ಷಾಮದಿಂದ ಕ್ಷೀಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬರವು ಬಹು ಘೋರವಾಗಿತ್ತು. ದೇಶದ ಯಾವ ಭಾಗದಲ್ಲೂ ಆಹಾರ ಸಿಕ್ಕುತ್ತಿರಲಿಲ್ಲ. ಈ ನಿಮಿತ್ತ ಈಜಿಪ್ಟ್ ದೇಶವೂ ಕಾನಾನ್ ನಾಡೂ ಹಾಗೆ ಸೊರಗಿಹೋಗುತ್ತಿದ್ದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬರವು ಬಹು ಘೋರವಾಗಿದ್ದದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿವಿುತ್ತ ಐಗುಪ್ತದೇಶದವರಿಗೂ ಕಾನಾನ್‍ದೇಶದವರಿಗೂ ದಿಕ್ಕುತೋರದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಬರಗಾಲದಿಂದ ಬಡದೇಶಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:13
9 ತಿಳಿವುಗಳ ಹೋಲಿಕೆ  

“ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.


ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.


ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?


ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.


ಈಜಿಪ್ಟಿನಲ್ಲಿ ಬರುವದಕ್ಕಿರುವ ಬರಗಾಲದ ಏಳು ವರ್ಷಗಳಲ್ಲಿ ದೇಶವು ಹಾಳಾಗದಂತೆ, ಆಹಾರವು ದೇಶಕ್ಕೆ ಸಂಗ್ರಹವಾಗಿರುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು