ಆದಿಕಾಂಡ 47:19 - ಕನ್ನಡ ಸಮಕಾಲಿಕ ಅನುವಾದ19 ನಾವೂ, ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವುದು ಏಕೆ? ನಮ್ಮನ್ನೂ, ನಮ್ಮ ಭೂಮಿಯನ್ನೂ ಆಹಾರಕ್ಕಾಗಿ ಕೊಂಡುಕೋ. ಆಗ ನಾವೂ, ನಮ್ಮ ಭೂಮಿಯೂ ಫರೋಹನಿಗೆ ದಾಸರಾಗಿರುವೆವು. ನಮಗೆ ಬೀಜವನ್ನು ಕೊಡು, ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವುದು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾವೇಕೆ ನಿಮ್ಮ ಕಣ್ಣೆದುರಿಗೆ ಸಾಯಬೇಕು? ನಮ್ಮ ಭೂಮಿಯೇಕೆ ಹಾಳಾಗಬೇಕು? ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯ ಕೊಡಿ, ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವರಿಗೆ ಗುಲಾಮರಾಗುತ್ತೇವೆ. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿ ಪಾಳುಬೀಳಬಾರದಿದ್ದರೆ ಧಾನ್ಯಕೊಡಿ,” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿನ್ನ ಕಣ್ಣೆದುರಿಗೆ ನಾವು ಯಾಕೆ ಸಾಯಬೇಕು; ನಮ್ಮ ಭೂವಿುಯು ಯಾಕೆ ಹಾಳಾಗಬೇಕು. ನಮ್ಮನ್ನೂ ನಮ್ಮ ಭೂವಿುಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂವಿುಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂವಿುಯು ಹಾಳು ಬೀಳಬಾರದಿದ್ದರೆ ನೀನು ಬೀಜವನ್ನು ಕೊಡಬೇಕೆಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |