Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:24 - ಕನ್ನಡ ಸಮಕಾಲಿಕ ಅನುವಾದ

24 ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕೊಯ್ದು ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು. ಮಿಕ್ಕ ನಾಲ್ಕು ಪಾಲು ನಿಮ್ಮದು. ಅದನ್ನು ಬಿತ್ತನೆಗಾಗಿ ಮತ್ತು ನಿಮ್ಮ ಮನೆಯವರ ಹಾಗು ಕುಟುಂಬದವರ ಜೀವನಕ್ಕಾಗಿ ಇಟ್ಟುಕೊಳ್ಳಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ವಿುಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ, ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಜೀವನಕ್ಕಾಗುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:24
14 ತಿಳಿವುಗಳ ಹೋಲಿಕೆ  

ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ.


ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.


ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.


ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು.


ಆಗ ಅವರು, “ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ದಯೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು,” ಎಂದರು.


ಯೋಸೇಫನು ಜನರಿಗೆ, “ಇಂದು ನಿಮ್ಮನ್ನೂ, ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜ ಬಿತ್ತಿರಿ.


ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.


ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿಕೊಂಡು ಬಂದ ಜನರನ್ನು ನನಗೆ ಕೊಡು. ಸಂಪತ್ತನ್ನು ನೀನು ತೆಗೆದುಕೋ,” ಎಂದನು.


ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.


“ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.


“ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.


ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.


ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು