Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:25 - ಕನ್ನಡ ಸಮಕಾಲಿಕ ಅನುವಾದ

25 ಆಗ ಅವರು, “ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ದಯೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಅವರು - ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾವಿುಯ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:25
11 ತಿಳಿವುಗಳ ಹೋಲಿಕೆ  

ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.


ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ಅಬ್ರಹಾಮನು ಅವರಿಗೆ, “ನನ್ನ ಸ್ವಾಮಿ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ, ನಿಮ್ಮ ದಾಸನ ಬಳಿಯಿಂದ ಹೊರಟು ಹೋಗಬೇಡಿ.


ಜೀವಿಗಳ ಪ್ರತಿಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು; ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಜೀವಂತವಾಗಿ ಉಳಿಸಿಕೊಳ್ಳಬೇಕು.


ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.


ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.


ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು