Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:27 - ಕನ್ನಡ ಸಮಕಾಲಿಕ ಅನುವಾದ

27 ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಸ್ರಾಯೇಲ್ಯರು ಐಗುಪ್ತದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:27
19 ತಿಳಿವುಗಳ ಹೋಲಿಕೆ  

ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.


“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.


ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ.


ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.


ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ, ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು.


ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿದಿರಿ. ಅವರು ಸ್ವಾಧೀನಮಾಡಿಕೊಳ್ಳುವರು ಎಂದು ನೀವು ಅವರ ಪಿತೃಗಳಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಬರಮಾಡಿದಿರಿ.


ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ.


ಆದರೆ ಈಜಿಪ್ಟನವರು ಅವರನ್ನು ಎಷ್ಟು ಶ್ರಮಪಡಿಸಿದರೋ, ಅಷ್ಟು ಅಧಿಕವಾಗಿ ಅವರು ಹೆಚ್ಚಿ ಹರಡಿಕೊಂಡದ್ದರಿಂದ ಈಜಿಪ್ಟಿನವರು ಇಸ್ರಾಯೇಲರ ಬಗ್ಗೆ ಹೆದರಿದವರಾದರು.


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ನಿನ್ನಿಂದ ಅನೇಕ ಜನಾಂಗಗಳೂ ಅರಸರೂ ಹುಟ್ಟುವರು.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ಆದರೆ ನೀರು ಭೂಮಿಯ ಮೇಲೆಲ್ಲಾ ಇರುವುದರಿಂದ ಪಾರಿವಾಳವು ಕಾಲಿಡುವುದಕ್ಕೂ ಸ್ಥಳವನ್ನು ಕಾಣದೆ, ಅವನ ಬಳಿಗೆ ನಾವೆಗೆ ಹಿಂದಿರುಗಿತು. ಅವನು ಕೈಚಾಚಿ ಅದನ್ನು ಹಿಡಿದು, ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.


ಅವನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು, ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.


ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ. ದೇಶವು ನಿಮ್ಮ ಮುಂದೆ ಇದೆ. ನೀವು ಅದರಲ್ಲಿ ವಾಸಿಸಿ, ಅದರಲ್ಲಿ ವ್ಯಾಪಾರಮಾಡಿ, ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ,” ಎಂದನು.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು