ಆದಿಕಾಂಡ 47:30 - ಕನ್ನಡ ಸಮಕಾಲಿಕ ಅನುವಾದ30 ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಾನು ಮೃತರಾದ ಪಿತೃಗಳೊಂದಿಗೆ ಸೇರಿಕೊಂಡಾಗ, ನನ್ನ ಶವವನ್ನು ಈಜಿಪ್ಟ್ ದೇಶದಿಂದ ತೆಗೆದುಕೊಂಡು ಹೋಗಿ, ಆ ಪಿತೃಗಳ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕು" ಎಂದು ಕೇಳಿಕೊಂಡನು. ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ,” ಎಂದು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾನು ಪಿತೃಗಳಲ್ಲಿ ಸೇರಿದಾಗ ನನ್ನ ಶವವನ್ನು ಐಗುಪ್ತದೇಶದಿಂದ ತೆಗೆದುಕೊಂಡು ಹೋಗಿ ಆ ಪಿತೃಗಳ ಶ್ಮಶಾನ ಭೂವಿುಯಲ್ಲಿಯೇ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂಬದಾಗಿ ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕೆಂದು ಹೇಳಲು ಅವನು - ನೀನು ಹೇಳಿದಂತೆಯೇ ಮಾಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿ |