ಆದಿಕಾಂಡ 47:4 - ಕನ್ನಡ ಸಮಕಾಲಿಕ ಅನುವಾದ4 ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದಲ್ಲದೆ ಅವರು ಫರೋಹನಿಗೆ, “ಕಾನಾನ್ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದಲ್ಲದೆ ಅವರು ಅವನಿಗೆ - ಕಾನಾನ್‍ದೇಶದಲ್ಲಿ ಬರವು ಘೋರವಾದ್ದರಿಂದ ನಿನ್ನ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ; ಆದದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್‍ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು ಎಂದು ಹೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |