Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:9 - ಕನ್ನಡ ಸಮಕಾಲಿಕ ಅನುವಾದ

9 ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:9
29 ತಿಳಿವುಗಳ ಹೋಲಿಕೆ  

“ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಗೆ ಕಿವಿಗೊಡಿರಿ; ನನ್ನ ಕಣ್ಣೀರನ್ನು ನೋಡಿರಿ ಮೌನವಾಗಿರಬೇಡಿರಿ; ಏಕೆಂದರೆ, ನಾನು ನನ್ನ ಪಿತೃಗಳೆಲ್ಲರ ಹಾಗೆ ನಿಮ್ಮ ಸಂಗಡ ಪರದೇಶಸ್ಥನಂತೆ ವಾಸಿಸುತ್ತೇನೆ; ನಾನೂ ಪ್ರವಾಸಿಯಾಗಿದ್ದೇನೆ.


ಆಗ ಇಸಾಕನು ನೂರ ಎಂಬತ್ತು ವರ್ಷದವನಾಗಿದ್ದನು.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


“ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ.


ಇವುಗಳಾದ ತರುವಾಯ ನೂನನ ಮಗ ಯೆಹೋಶುವನೆಂಬ ಯೆಹೋವ ದೇವರ ಸೇವಕನು ನೂರಹತ್ತು ವರುಷ ವಯಸ್ಸಿನವನಾಗಿ ಮರಣಹೊಂದಿದನು.


ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ. ಅವನ ಬಲ ಕುಂದಿಹೋಗಿರಲಿಲ್ಲ.


ಅವರು ಫರೋಹನ ಮುಂದೆ ಮಾತನಾಡುವಾಗ ಮೋಶೆಯು ಎಂಬತ್ತು ವರ್ಷದವನೂ ಆರೋನನು ಎಂಬತ್ತಮೂರು ವರ್ಷದವನೂ ಆಗಿದ್ದನು.


ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.


ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.


ನನ್ನ ಪ್ರವಾಸದ ಮನೆಯಲ್ಲಿ ನಿಮ್ಮ ತೀರ್ಪುಗಳು ನನಗೆ ಗಾನ ವಿಷಯವಾಗಿದೆ.


ಈ ಭೂಮಿಯಲ್ಲಿ ನಾನೊಬ್ಬ ಪ್ರವಾಸಿಯಾಗಿದ್ದೇನೆ; ನಿಮ್ಮ ಆಜ್ಞೆಗಳನ್ನು ನನಗೆ ಮರೆಮಾಡಬೇಡಿರಿ.


ಇದಲ್ಲದೆ ಯಾಕೋಬನು ಈಜಿಪ್ಟ್ ದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಲ್ವತ್ತೇಳು ವರ್ಷಗಳು.


ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ, ಶೇಮನು ಐನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.


ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ.


ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.


ಮೆತೂಷೆಲಹನಿಗೆ ಒಟ್ಟು ಒಂಬೈನೂರ ಅರವತ್ತೊಂಭತ್ತು ವರ್ಷಗಳಾಗಿದ್ದವು. ತರುವಾಯ ಅವನು ಸತ್ತನು.


ಹೀಗಿರುವುದರಿಂದ ಶರೀರದಲ್ಲಿ ವಾಸಿಸುವವರೆಗೂ ನಾವು ಕರ್ತನಿಂದ ದೂರವಾಗಿದ್ದೇವೆಂದು ತಿಳಿದು, ನಾವು ಯಾವಾಗಲೂ ಭರವಸೆ ಉಳ್ಳವರಾಗಿದ್ದೇವೆ.


ಫರೋಹನು ಯಾಕೋಬನಿಗೆ, “ನಿನಗೆ ಎಷ್ಟು ವರ್ಷಗಳು?” ಎಂದು ಕೇಳಿದನು.


ನಾನು ಹೊರಟುಹೋಗಿ ಇಲ್ಲವಾಗುವ ಮೊದಲು ನಾನು ಪುನಃ ಸಂತೋಷಿಸುವಂತೆ ನಿಮ್ಮ ಕೋಪದ ದೃಷ್ಟಿಯನ್ನು ಬೇರೆ ಕಡೆ ತಿರುಗಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು