Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:1 - ಕನ್ನಡ ಸಮಕಾಲಿಕ ಅನುವಾದ

1 ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೆಲವು ಕಾಲವಾದ ಮೇಲೆ, “ತಂದೆ ಬಹಳ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದಾರೆ,” ಎಂಬ ಸುದ್ದಿ ಜೋಸೆಫನಿಗೆ ಬಂದಿತು. ಅವನು ಮನಸ್ಸೆ ಮತ್ತು ಎಫ್ರಯಿಮ್‍ ಎಂಬ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಲವು ಕಾಲವಾದ ಮೇಲೆ ತಂದೆಯು ಬಹಳ ಬಲಹೀನನಾಗಿ ಬಿದ್ದಿದ್ದಾನೆಂಬ ವರ್ತಮಾನವು ಯೋಸೇಫನಿಗೆ ಬರಲು ಅವನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ಸಂಗಡ ಕರೆದುಕೊಂಡು ಅವನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸ್ವಲ್ಪ ಕಾಲದ ನಂತರ, ತಂದೆಯು ಬಹಳ ಅನಾರೋಗ್ಯದಿಂದಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆಯನ್ನು ಮತ್ತು ಎಫ್ರಾಯೀಮನನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:1
12 ತಿಳಿವುಗಳ ಹೋಲಿಕೆ  

ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.


ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ ಇಸ್ರಾಯೇಲರ ಮೇಲೆ ಸಮಾಧಾನವಿರಲಿ.


ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.


ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.


ತರುವಾಯ ಯೋಬನು ನೂರ ನಾಲ್ವತ್ತು ವರ್ಷ ಬಾಳಿದನು. ನಾಲ್ಕನೆಯ ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.


ನಂಬಿಕೆಯಿಂದಲೇ ಯಾಕೋಬನು ಮರಣ ಹೊಂದುವ ಸಮಯದಲ್ಲಿ ಯೋಸೇಫನ ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.


ಯಾಕೋಬನಿಗೆ, “ನಿನ್ನ ಮಗ ಯೋಸೇಫನು ಬಂದಿದ್ದಾನೆ,” ಎಂದು ತಿಳಿಸಿದಾಗ, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.


“ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.


ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.


ಆಗ ಎಲೀಷನು ಮರಣಕರ ವ್ಯಾಧಿಯಿಂದ ಬಳಲುತ್ತಿದ್ದಾಗ, ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು, ಅವನ ಮೇಲೆ ಬಿದ್ದು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥಗಳೂ ಕುದುರೆ ಸವಾರರು ಆಗಿದ್ದವನೇ!” ಎಂದು ಹೇಳುತ್ತಾ ಅತ್ತನು.


ಅನಂತರ ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ವರ್ಷದ ಆರಂಭದಲ್ಲಿ ಮೋವಾಬ್ಯರ ದಂಡುಗಳು ದೇಶದಲ್ಲಿ ಪ್ರವೇಶಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು