Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:11 - ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ತಿರುಗಿ ನೋಡುವೆನೆಂದು ನಾನು ನೆನಸಿರಲಿಲ್ಲ. ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಇಸ್ರಾಯೇಲನು ಯೋಸೇಫನಿಗೆ - ನಿನ್ನ ಮುಖವನ್ನು ತಿರಿಗಿ ನೋಡುವೆನೆಂದು ನಾನು ನೆನಸಿರಲಿಲ್ಲ; ಆದರೆ ನಾನು ನಿನ್ನನ್ನು ಮಾತ್ರವಲ್ಲದೆ ನಿನ್ನ ಸಂತಾನವನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನಲ್ಲಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಇಸ್ರೇಲನು ಯೋಸೇಫನಿಗೆ, “ನಾನು ಮತ್ತೆ ನಿನ್ನ ಮುಖವನ್ನು ನೋಡುತ್ತೇನೆ ಎಂದು ಯೋಚಿಸಿರಲಿಲ್ಲ. ಆದರೆ ನಾನು ನಿನ್ನನ್ನೂ ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:11
9 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ


“ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.


ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.


ಇಸ್ರಾಯೇಲನು ಮುದುಕನಾಗಿದ್ದದ್ದರಿಂದ, ಅವನ ಕಣ್ಣುಗಳು ಕಾಣದಷ್ಟು ಮಬ್ಬಾಗಿದ್ದವು. ಯೋಸೇಫನು ಅವರನ್ನು ಅವನ ಸಮೀಪಕ್ಕೆ ತಂದಾಗ, ಅವನು ಅವರನ್ನು ಮುದ್ದಿಟ್ಟು, ಅಪ್ಪಿಕೊಂಡನು.


ಆಗ ಯೋಸೇಫನು ಅವರನ್ನು ಮೊಣಕಾಲುಗಳ ಬಳಿಯಿಂದ ಬರಮಾಡಿ ತಂದೆಗೆ ಅಡ್ಡಬಿದ್ದನು.


ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ ಇಸ್ರಾಯೇಲರ ಮೇಲೆ ಸಮಾಧಾನವಿರಲಿ.


ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು