ಆದಿಕಾಂಡ 48:16 - ಕನ್ನಡ ಸಮಕಾಲಿಕ ಅನುವಾದ16 ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.” ಅಧ್ಯಾಯವನ್ನು ನೋಡಿ |