Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:18 - ಕನ್ನಡ ಸಮಕಾಲಿಕ ಅನುವಾದ

18 ಯೋಸೇಫನು ತನ್ನ ತಂದೆಗೆ, “ಅಪ್ಪಾ, ಹಾಗಲ್ಲ, ಇವನೇ ಜೇಷ್ಠಪುತ್ರನು. ಇವನ ತಲೆಯ ಮೇಲೆ ಬಲಗೈ ಇಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹಾಗಲ್ಲಪ್ಪಾ; ಇವನೇ ಚೊಚ್ಚಲಮಗನು; ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:18
11 ತಿಳಿವುಗಳ ಹೋಲಿಕೆ  

“ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು.


ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.


“ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು.


ಹಾಗೆ ಮಾಡದೆ, ಗಂಡಸರಾದ ನೀವು ಮಾತ್ರ ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಏಕೆಂದರೆ ಇದನ್ನೇ ನೀವು ಬಯಸಿದಿರಿ,” ಎಂದನು. ತರುವಾಯ ಫರೋಹನು ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.


“ರೂಬೇನನೇ, ನೀನು ನನ್ನ ಜೇಷ್ಠಪುತ್ರನು. ನನ್ನ ಶಕ್ತಿ, ನನ್ನ ಬಲದ ಸಂಕೇತವೂ, ಗೌರವದಲ್ಲಿ ಶಕ್ತಿಯಲ್ಲಿ ಮಿತಿಮೀರಿದವನೂ ಆಗಿರುವೆ.


ಯೋಸೇಫನು ಅವರನ್ನು ಹಿರಿಯವರಿಂದ ಕಿರಿಯವನವರೆಗೆ ಅವರವರ ವಯಸ್ಸಿನ ಪ್ರಕಾರ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮತಮ್ಮೊಳಗೆ ಆಶ್ಚರ್ಯಪಟ್ಟರು.


ಅದಕ್ಕೆ ಲಾಬಾನನು, “ಹಿರಿಯಳಿಗಿಂತ ಮೊದಲು ಕಿರಿಯಳನ್ನು ಮದುವೆ ಮಾಡಿಕೊಡುವುದು ನಮ್ಮ ಪದ್ಧತಿಯಲ್ಲ.


ತರುವಾಯ ರೆಬೆಕ್ಕಳು ಮನೆಯಲ್ಲಿದ್ದ ತನ್ನ ಹಿರಿಯ ಮಗನಾದ ಏಸಾವನ ಒಳ್ಳೆಯ ವಸ್ತ್ರವನ್ನು ತೆಗೆದುಕೊಂಡು, ತನ್ನ ಕಿರಿಯ ಮಗ ಯಾಕೋಬನಿಗೆ ಉಡಿಸಿದಳು.


ಅದಕ್ಕೆ ಲೋಟನು, “ಸ್ವಾಮಿ, ಅದು ನನ್ನಿಂದಾಗದು.


ತನ್ನ ತಂದೆಯು ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನು ಇಟ್ಟದ್ದನ್ನು ಯೋಸೇಫನು ಕಂಡಾಗ, ಅದು ಅವನಿಗೆ ಇಷ್ಟವಾಗಿರಲಿಲ್ಲ. ಆದ್ದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು, ಎಫ್ರಾಯೀಮನ ತಲೆಯ ಮೇಲಿಂದ ತೆಗೆದು, ಮನಸ್ಸೆಯ ತಲೆಯ ಮೇಲೆ ಇಡುವುದರಲ್ಲಿದ್ದನು.


ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು