Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:20 - ಕನ್ನಡ ಸಮಕಾಲಿಕ ಅನುವಾದ

20 ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವದಿಸಿ, ಹೀಗೆಂದನು: “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಈ ಆಶೀರ್ವಾದವನ್ನು ಹೇಳುವರು: ‘ಎಫ್ರಾಯೀಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲಿ.’ ” ಹೀಗೆ ಹೇಳುತ್ತಾ ಯಾಕೋಬನು ಎಫ್ರಾಯೀಮನಿಗೆ ಮನಸ್ಸೆಗಿಂತಲೂ ಉನ್ನತಸ್ಥಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆ ದಿನ ಅವರನ್ನು ಆಶೀರ್ವದಿಸುತ್ತಾ ಹೀಗೆಂದನು: "ಎಫ್ರಯಿಮ್ - ಮನಸ್ಸೆಯಂತೆ ನಿಮ್ಮನ್ನೂ ಅಭಿವೃದ್ಧಿಗೊಳಿಸಲಿ ದೇವರು! ಹೀಗೆ ನಿಮ್ಮ ಹೆಸರನ್ನು ಉಚ್ಚರಿಸುತ್ತಾ ಇತರರನ್ನು ಆಶೀರ್ವದಿಸುವರು ಇಸ್ರಯೇಲರು". ಈ ರೀತಿಯಾಗಿ ಅವನು ಎಫ್ರಯಿಮನನ್ನು ಮನಸ್ಸೆಗಿಂತ ಮುಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ಕಾಲದಲ್ಲಿ ಅವನು ಅವರನ್ನು ಆಶೀರ್ವದಿಸಿ - ಇಸ್ರಾಯೇಲ್ಯರು ಯಾರನ್ನಾದರೂ ಆಶೀರ್ವದಿಸುವಾಗ - ಎಫ್ರಾಯೀಮನಿಗೂ ಮನಸ್ಸೆಗೂ ಉಂಟಾದ ಸಂತತಿಯಂತೆ ದೇವರು ನಿನಗೂ ಸಂತಾನವನ್ನು ಅನುಗ್ರಹಿಸಲಿ ಎಂದು ನಿಮ್ಮನ್ನು ದೃಷ್ಟಾಂತಮಾಡಿ ಹೇಳುವರು ಅಂದನು. ಹೀಗೆ ಹೇಳಿದ್ದರಿಂದ ಎಫ್ರಾಯೀಮನನ್ನು ಮನಸ್ಸೆಗೆ ಮುಂದಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:20
13 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.”


ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.


ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು.


ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗ ಗದ್ದೀ,


ಎಂಟನೆಯ ದಿನದಲ್ಲಿ ಮನಸ್ಸೆ ಗೋತ್ರದ ಪ್ರಧಾನನಾದ ಪೆದಾಚೂರನ ಮಗ ಗಮಲಿಯೇಲನು ಅರ್ಪಿಸಿದನು.


ಏಳನೆಯ ದಿನದಲ್ಲಿ ಎಫ್ರಾಯೀಮ್ ಗೋತ್ರದ ಪ್ರಧಾನನಾದ ಅಮ್ಮೀಹೂದನ ಮಗ ಎಲೀಷಾಮನು ಅರ್ಪಿಸಿದನು.


ಎಫ್ರಾಯೀಮ್ ಗೋತ್ರದ ನೂನನ ಮಗ ಹೋಶೇಯ,


ನಂಬಿಕೆಯಿಂದಲೇ ಯಾಕೋಬನು ಮರಣ ಹೊಂದುವ ಸಮಯದಲ್ಲಿ ಯೋಸೇಫನ ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.


ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.


ಯೋಸೇಫನ ಸಂತತಿಯರು ಯೆಹೋಶುವನಿಗೆ, “ಯೆಹೋವ ದೇವರು ನಮ್ಮನ್ನು ಈವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ, ನಾವು ಮಹಾ ಜನಾಂಗವಾಗಿದ್ದೇವೆ. ಹೀಗಿರುವಾಗ ನೀವು ನಮಗೆ ಸೊತ್ತಾಗಿ ಒಂದೇ ಒಂದು ಭಾಗವನ್ನು ಮಾತ್ರ ಪಾಲನ್ನಾಗಿ ಕೊಟ್ಟಿದ್ದು ಏಕೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು