ಆದಿಕಾಂಡ 48:4 - ಕನ್ನಡ ಸಮಕಾಲಿಕ ಅನುವಾದ4 ದೇವರು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು, ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಶಾಶ್ವತವಾದ ಸ್ವತ್ತನ್ನಾಗಿ ಕೊಡುತ್ತೇನೆ,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು. ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನಾಂಗಗಳು ನಿನ್ನಿಂದುಂಟಾಗುವಂತೆ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ಈ ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |