Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:5 - ಕನ್ನಡ ಸಮಕಾಲಿಕ ಅನುವಾದ

5 “ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನಾನು ನಿನ್ನ ಬಳಿಗೆ ಈಜಿಪ್ಟ್ ದೇಶಕ್ಕೆ ಬರುವುದಕ್ಕೆ ಮುಂಚೆ ಇಲ್ಲಿ ಹುಟ್ಟಿದ್ದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಬೇಕು. ರೂಬೇನ್ ಮತ್ತು ಸಿಮೆಯೋನ್ ನನ್ನ ಮಕ್ಕಳಾಗಿರುವಂತೆಯೇ ಎಫ್ರಯಿಮ್ ಮತ್ತು ಮನಸ್ಸೆ ನನ್ನ ಮಕ್ಕಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಐಗುಪ್ತದೇಶಕ್ಕೆ ನಿನ್ನ ಬಳಿಗೆ ಬರುವದಕ್ಕಿಂತ ಮುಂಚೆ ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೇ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ ನಿನಗೆ ಇಬ್ಬರು ಗಂಡುಮಕ್ಕಳಿದ್ದಾರೆ. ನಾನು ಈಜಿಪ್ಟಿಗೆ ಬರುವುದಕ್ಕಿಂತ ಮೊದಲೇ ಅವರು ಇಲ್ಲಿ ಹುಟ್ಟಿದರು. ನಿನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ನನ್ನ ಮಕ್ಕಳಂತೆಯೇ ಇದ್ದಾರೆ. ಅವರು ನನಗೆ ರೂಬೇನ್ ಮತ್ತು ಸಿಮೆಯೋನರಂತೆಯೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:5
21 ತಿಳಿವುಗಳ ಹೋಲಿಕೆ  

ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.


ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.


ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.


ಈಗ ಈ ದೇಶವನ್ನು ಒಂಬತ್ತು ಗೋತ್ರಗಳಿಗೂ ಮನಸ್ಸೆ ಕುಲದ ಅರ್ಧ ಗೋತ್ರಕ್ಕೆ ಸೊತ್ತಾಗಿ ಪಾಲು ಮಾಡಿಕೊಡು,” ಎಂದು ಹೇಳಿದರು.


ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ಯೋಸೇಫನ ಗೋತ್ರದಲ್ಲಿ, ಎಫ್ರಾಯೀಮ್‌ನಿಂದ ಅಮ್ಮೀಹೂದನ ಮಗ ಎಲೀಷಾಮಾ, ಮನಸ್ಸೆ ಗೋತ್ರದಿಂದ ಪೆದಾಚೂರನ ಮಗನಾದ ಗಮಲಿಯೇಲ್,


ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.


ನಂಬಿಕೆಯಿಂದಲೇ ಯಾಕೋಬನು ಮರಣ ಹೊಂದುವ ಸಮಯದಲ್ಲಿ ಯೋಸೇಫನ ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.


ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.


ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ಸಹೋದರರ ಸೊತ್ತಿಗೆ ಬಾಧ್ಯತೆಯನ್ನು ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.


ಜಲರಾಶಿಗಳು ನಿಮ್ಮನ್ನು ಕಂಡವು. ದೇವರೇ, ಜಲರಾಶಿಗಳು ನಿಮ್ಮನ್ನು ಕಂಡು ಹೊರಳಾಡಿದವು. ಅಗಾಧ ಸಾಗರಗಳು ಅಲ್ಲಕಲ್ಲೋಲವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು