ಆದಿಕಾಂಡ 48:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ಸಹೋದರರ ಸೊತ್ತಿಗೆ ಬಾಧ್ಯತೆಯನ್ನು ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸ್ವತ್ತಿನಲ್ಲಿ ಬಾಧ್ಯತೆ ಹೊಂದಿ, ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸೊತ್ತಿಗೆ ಬಾಧ್ಯತೆ ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಲಿ, ಅವರು ತಮ್ಮ ಅಣ್ಣಂದಿರ ಸ್ವಾಸ್ತ್ಯದಲ್ಲಿ ಬಾಧ್ಯತೆ ಹೊಂದಿ ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಈ ಇಬ್ಬರು ಗಂಡುಮಕ್ಕಳು ನನಗೆ ಮಕ್ಕಳಂತೆಯೇ ಇರುತ್ತಾರೆ. ನಾನು ಹೊಂದಿರುವ ಪ್ರತಿಯೊಂದರಲ್ಲಿಯೂ ಅವರು ಪಾಲನ್ನು ಹೊಂದುವರು. ಆದರೆ ನಿನಗೆ ಬೇರೆ ಗಂಡುಮಕ್ಕಳಿದ್ದರೆ ಅವರು ಎಫ್ರಾಯೀಮ್ ಮತ್ತು ಮನಸ್ಸೆಯವರಿಗೆ ಮಕ್ಕಳಾಗಿರುತ್ತಾರೆ. ಅಂದರೆ ಎಫ್ರಾಯೀಮ್ ಮತ್ತು ಮನಸ್ಸೆ ಹೊಂದಿರುವ ಪ್ರತಿಯೊಂದರಲ್ಲಿ ಅವರು ಪಾಲನ್ನು ಹೊಂದುವರು. ಅಧ್ಯಾಯವನ್ನು ನೋಡಿ |