Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:7 - ಕನ್ನಡ ಸಮಕಾಲಿಕ ಅನುವಾದ

7 ನಾನು ಪದ್ದನ್ ಅರಾಮಿನಿಂದ ಬಂದಾಗ, ಕಾನಾನ್ ದೇಶದಲ್ಲಿ ಎಫ್ರಾತಿನಿಂದ ಸ್ವಲ್ಪ ದೂರವಾಗಿರುವಾಗ, ರಾಹೇಲಳು ಸತ್ತುಹೋದಳು. ಅಲ್ಲಿ ಅಂದರೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಯನ್ನು ಸಮಾಧಿಮಾಡಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಪದ್ದನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಏಕೆಂದರೆ ನಿಮ್ಮ ತಾಯಿ ರಾಖೇಲಳು, ನಾನು ಮೆಸಪೊಟೇಮಿಯಾದಿಂದ ಬರುವಾಗ, ಕಾನಾನ್ ನಾಡಿನಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನು ಸ್ವಲ್ಪ ದೂರ ಇದ್ದಾಗಲೆ ದಾರಿಯಲ್ಲಿ ಸತ್ತು ನನ್ನನ್ನು ಅಗಲಿಹೋದಳು. ಈಗ ಬೇತ್ಲೆಹೇಮ್ ಎನಿಸಿಕೊಳ್ಳುವ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಆಕೆಯನ್ನು ಸಮಾಧಿಮಾಡಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಪದ್ದನ್ಅರಾವಿುನಿಂದ ಬರುತ್ತಿರಲು ಕಾನಾನ್‍ದೇಶದಲ್ಲಿ ಎಫ್ರಾತನ್ನು ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತು ನನ್ನನ್ನು ಅಗಲಿಹೋದಳು. ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪದ್ದನ್‌ಅರಾಮಿನಿಂದ ಹಿಂತಿರುಗಿ ಬರುತ್ತಿರುವಾಗ ರಾಹೇಲಳು ಸತ್ತಳು. ಇದು ನನಗೆ ತುಂಬ ದುಃಖವನ್ನು ಉಂಟುಮಾಡಿತು. ನಾವು ಕಾನಾನ್ ದೇಶದಲ್ಲಿ ಎಫ್ರಾತ್ ನಗರದ ಕಡೆಗೆ ಪ್ರಯಾಣ ಮಾಡುತ್ತಿದ್ದೆವು. ಆದ್ದರಿಂದ ನಾನು ಅವಳನ್ನು ಬೆತ್ಲೆಹೇಮೆಂಬ ಎಫ್ರಾತ್ ನಗರದ ರಸ್ತೆಯಲ್ಲಿ ಸಮಾಧಿ ಮಾಡಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:7
13 ತಿಳಿವುಗಳ ಹೋಲಿಕೆ  

“ರಾಮದಲ್ಲಿ ರೋದನೆಯು ಕೇಳಿಸಿತು, ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”


ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ, ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ, ಅವನನ್ನು ಆಶೀರ್ವದಿಸಿದರು.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾಗಿದ್ದನು. ಈ ಇಷಯನಿಗೆ ಎಂಟು ಮಂದಿ ಪುತ್ರರಿದ್ದರು. ಸೌಲನ ಕಾಲದಲ್ಲಿ ಇಷಯನು ವೃದ್ಧನಾಗಿದ್ದನು.


ನೀನು ಈ ಹೊತ್ತು ನನ್ನನ್ನು ಬಿಟ್ಟುಹೋದಾಗ, ಬೆನ್ಯಾಮೀನ್ಯರ ಮೇರೆಯಾದ ಚೆಲ್ಚಹಿನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವೆ. ಅವರು ನಿನಗೆ, ‘ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು, ನಿನಗೋಸ್ಕರ ಚಿಂತೆಪಟ್ಟು, ತನ್ನ ಮಗನಿಗೋಸ್ಕರ ಏನು ಮಾಡಲಿ? ಎನ್ನುತ್ತಾನೆ,’ ಎಂದು ಹೇಳುವರು.


ಎಫ್ರಾಯೀಮ್ ಬೆಟ್ಟದ ಪ್ರದೇಶ ರಾಮತಾಯೀಮ್ ಚೋಫಿಮಿನಲ್ಲಿ ಎಲ್ಕಾನ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ಯನಾದ ಚೂಫನ ಮೊಮ್ಮಗನೂ ತೋಹುವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.


ಆ ಮನುಷ್ಯನ ಹೆಸರು ಎಲೀಮೆಲೆಕನು. ಅವನ ಹೆಂಡತಿಯ ಹೆಸರು ನೊವೊಮಿ. ಅವನ ಪುತ್ರರಲ್ಲಿ ಒಬ್ಬನ ಹೆಸರು ಮಹ್ಲೋನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಬಂದು ಮೋವಾಬ್ ದೇಶದಲ್ಲಿ ವಾಸವಾಗಿದ್ದರು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.


ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.


ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ಸಹೋದರರ ಸೊತ್ತಿಗೆ ಬಾಧ್ಯತೆಯನ್ನು ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.


ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು