ಆದಿಕಾಂಡ 49:11 - ಕನ್ನಡ ಸಮಕಾಲಿಕ ಅನುವಾದ11 ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ತನ್ನ ವಾಹನಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು, ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಬಟ್ಟೆಗಳನ್ನು ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು. ಅಧ್ಯಾಯವನ್ನು ನೋಡಿ |
ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.