Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:14 - ಕನ್ನಡ ಸಮಕಾಲಿಕ ಅನುವಾದ

14 “ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ಸಾಕಾರನು ಕುರೀಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಇಸ್ಸಾಕಾರನು ಬಹಳ ಕಷ್ಟಪಟ್ಟು ದುಡಿಯುವ ಕತ್ತೆಯಂತಿದ್ದಾನೆ. ಅವನು ಭಾರವಾದ ಹೊರೆಯನ್ನು ಹೊರುವುದರಿಂದ ಮಲಗಿ ವಿಶ್ರಮಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:14
10 ತಿಳಿವುಗಳ ಹೋಲಿಕೆ  

ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.


ಲೇಯಳು, “ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ, ಅವನಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.


ಮೋಶೆಯು ಜೆಬುಲೂನರ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬೂಲೂನನೇ, ನಿನ್ನ ಪ್ರಯಾಣದಲ್ಲಿ ಸಂತೋಷಪಡು. ಇಸ್ಸಾಕಾರನೇ, ನಿನ್ನ ಗುಡಾರಗಳಲ್ಲಿ ಸಂತೋಷಪಡು.


ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು.


ವಿಶ್ರಾಂತಿಯು ಒಳ್ಳೆಯದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆ ಹೊರುವುದಕ್ಕೆ ತನ್ನ ಹೆಗಲನ್ನು ಬಗ್ಗಿಸಿ ಬಿಟ್ಟಿಯ ಕೆಲಸ ಮಾಡುವನು.


ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ, ನಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.


ನೀವು ಪಾಳೆಯದ ಬೆಂಕಿಯ ಬಳಿ ಮಲಗಿದರೂ, ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಹೊಳೆಯುವಂತಿರುವಿರಿ.”


ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು