ಆದಿಕಾಂಡ 49:28 - ಕನ್ನಡ ಸಮಕಾಲಿಕ ಅನುವಾದ28 ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಸರಿತಕ್ಕ ಆಶೀರ್ವಾದ ಕೊಟ್ಟನು. ಅಧ್ಯಾಯವನ್ನು ನೋಡಿ |
ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.
ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.