Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:29 - ಕನ್ನಡ ಸಮಕಾಲಿಕ ಅನುವಾದ

29 ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ - ನಾನು ನನ್ನ ಪಿತೃಗಳ ಬಳಿಗೆ ಸೇರಬೇಕಾದ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂವಿುಯಲ್ಲಿರುವ ಗವಿಯೊಳಗೆ ನನಗೆ ಪಿತೃಗಳ ಬಳಿಯಲ್ಲಿ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:29
16 ತಿಳಿವುಗಳ ಹೋಲಿಕೆ  

ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.


ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.


ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು.


ಇಸಾಕನು ಮುದುಕನಾಗಿಯೂ, ತುಂಬಾ ಆಯುಷ್ಯವುಳ್ಳವನಾಗಿಯೂ ಮರಣಹೊಂದಿ ತನ್ನ ಪಿತೃಗಳೊಂದಿಗೆ ಸೇರಿದನು. ಅವನ ಮಕ್ಕಳಾದ ಏಸಾವನೂ, ಯಾಕೋಬನೂ ಅವನನ್ನು ಸಮಾಧಿಮಾಡಿದರು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.


ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,


ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.


ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.


ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.


ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು