ಆದಿಕಾಂಡ 49:30 - ಕನ್ನಡ ಸಮಕಾಲಿಕ ಅನುವಾದ30 ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲದಲ್ಲಿರುವಂಥ ಅಬ್ರಹಾಮನು, ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆ ಗವಿ ಕಾನಾನ್ ನಾಡಿನ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿಸಹಿತ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆ ಗವಿಯು ಕಾನಾನ್‍ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬೈಲಿನಲ್ಲಿ ಅದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂವಿುಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆ ಗವಿಯು ಕಾನಾನ್ ದೇಶದ ಮಮ್ರೆಗೆ ಎದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅಬ್ರಹಾಮನು ತನ್ನ ಸಮಾಧಿಗಾಗಿ ಈ ಸ್ಥಳವನ್ನು ಎಫ್ರೋನನಿಂದ ಕೊಂಡುಕೊಂಡನು. ಅಧ್ಯಾಯವನ್ನು ನೋಡಿ |