ಆದಿಕಾಂಡ 49:7 - ಕನ್ನಡ ಸಮಕಾಲಿಕ ಅನುವಾದ7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅದಕ್ಕೆ ಶಾಪವುಂಟಾಗಲಿ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು; ಇಸ್ರಾಯೇಲ್ಯರಲ್ಲಿ ಅವರನ್ನು ಚದರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು. ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. ಅವರು ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. ಅವರು ಇಸ್ರೇಲಿನಲ್ಲೆಲ್ಲಾ ಹರಡಿಕೊಳ್ಳುವರು.” ಅಧ್ಯಾಯವನ್ನು ನೋಡಿ |