Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:8 - ಕನ್ನಡ ಸಮಕಾಲಿಕ ಅನುವಾದ

8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು; ನಿನ್ನ ಸಹೋದರರು ನಿನಗೇ ಎರಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. ನೀನು ನಿನ್ನ ವೈರಿಗಳನ್ನು ಸೋಲಿಸುವೆ. ನಿನ್ನ ಸಹೋದರರು ನಿನಗೇ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:8
38 ತಿಳಿವುಗಳ ಹೋಲಿಕೆ  

ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.


ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”


ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.


ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು.


ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: “ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.”


ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ಅಂದಿನಿಂದ ತಮ್ಮ ವಿರೋಧಿಗಳನ್ನು ತಮ್ಮ ಪಾದಪೀಠವಾಗಿ ಮಾಡಿಕೊಳ್ಳುವ ತನಕ ಕ್ರಿಸ್ತ ಯೇಸು ಕಾಯುತ್ತಿರುವರು.


ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಯೆಹೂದ ಪ್ರದೇಶದಲ್ಲಿ ದೇವರು ಸುಪ್ರಸಿದ್ಧರಾಗಿದ್ದಾರೆ. ಇಸ್ರಾಯೇಲಿನಲ್ಲಿ ದೇವರ ಹೆಸರು ಪ್ರಖ್ಯಾತವಾಗಿದೆ.


ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.


ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು, ಯೆಹೂದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದುಕೊಂಡ ಎಫ್ರಾಯೀಮನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.


ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.


ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.


ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.


ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.


ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.


ಯೆಹೂದನ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 76,500 ಪುರುಷರು.


ಯೆಹೂದನ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀನಾದಾಬನ ಮಗ ನಹಶೋನನು ಇದ್ದನು.


ಯೆಹೂದ ಗೋತ್ರದಲ್ಲಿ ಎಣಿಕೆಯಾದವರು 74,600 ಜನರು.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.


ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.


ಕುಟುಂಬಗಳ ಪ್ರಕಾರ ಯೆಹೂದನ ಪುತ್ರರು. ಶೇಲಹನಿಂದ ಶೇಲಾನ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹಿಯರ ಕುಟುಂಬ;


“ಆದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರೊಳಗಿಂದ ನನ್ನನ್ನು ಆರಿಸಿಕೊಂಡರು. ಏಕೆಂದರೆ ಅವನು ನಾಯಕನಾಗಿರಲು ಯೆಹೂದ ಗೋತ್ರವನ್ನೂ, ಯೆಹೂದ ಗೋತ್ರದಿಂದ ನನ್ನ ಕುಟುಂಬವನ್ನೂ ಆದುಕೊಂಡು, ನನ್ನ ತಂದೆಯ ಪುತ್ರರಲ್ಲಿ ನನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಲು ಚಿತ್ತವುಳ್ಳವರಾಗಿದ್ದರು.


ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸೊತ್ತಿನ ವಿವರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು