Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:4 - ಕನ್ನಡ ಸಮಕಾಲಿಕ ಅನುವಾದ

4 ಸೇತನು ಹುಟ್ಟಿದ ಮೇಲೆ ಆದಾಮನು ಗಂಡು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸೇತನು ಹುಟ್ಟಿದ ಮೇಲೆ ಆದಾಮನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:4
17 ತಿಳಿವುಗಳ ಹೋಲಿಕೆ  

ನೋಹನು ಹುಟ್ಟಿದ ಮೇಲೆ, ಲೆಮೆಕನು ಗಂಡು, ಹೆಣ್ಣು ಮಕ್ಕಳನ್ನು ಪಡೆದು, ಐನೂರ ತೊಂಬತ್ತೈದು ವರ್ಷ ಬದುಕಿದನು.


ಲೆಮೆಕನು ಹುಟ್ಟಿದ ಮೇಲೆ, ಮೆತೂಷೆಲಹನು ಏಳುನೂರ ಎಂಬತ್ತೆರಡು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.


ಮೆತೂಷೆಲಹನು ಹುಟ್ಟಿದ ತರುವಾಯ, ಹನೋಕನು ಮುನ್ನೂರು ವರ್ಷ ದೇವರೊಂದಿಗೆ ನಡೆದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.


ಹನೋಕನು ಹುಟ್ಟಿದ ಮೇಲೆ, ಯೆರೆದನು ಎಂಟುನೂರು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.


ಕೇನಾನನು ಮಹಲಲೇಲನು ಹುಟ್ಟಿದ ಮೇಲೆ ಎಂಟುನೂರ ನಲವತ್ತು ವರ್ಷ ಬದುಕಿ, ಗಂಡು ಹೆಣ್ಣು ಮಕ್ಕಳನ್ನು ಪಡೆದನು.


ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.


ಎನೋಷನು ಹುಟ್ಟಿದ ಮೇಲೆ ಸೇತನು ಎಂಟುನೂರ ಏಳು ವರುಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.


ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ.


ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.


ಅರ್ಪಕ್ಷದನು ಮೂವತ್ತೈದು ವರ್ಷದವನಾಗಿರುವಾಗ, ಅವನಿಂದ ಶೆಲಹನು ಹುಟ್ಟಿದನು.


ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು.


ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.


ಆದಾಮನು ನೂರಮೂವತ್ತು ವರುಷದವನಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ, “ಸೇತ್” ಎಂದು ಹೆಸರಿಟ್ಟನು.


ಆದಾಮನು ಒಟ್ಟು ಒಂಬೈನೂರ ಮೂವತ್ತು ವರುಷ ಬದುಕಿ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು