Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:11 - ಕನ್ನಡ ಸಮಕಾಲಿಕ ಅನುವಾದ

11 ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ಕಂಡಾಗ, “ಇದು ಈಜಿಪ್ಟಿನವರಿಗೆ ಘೋರವಾದ ದುಃಖ,” ಎಂದು ಹೇಳಿದರು. ಆದ್ದರಿಂದ ಅದಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ನಾಡಿನ ಜನರಾದ ಕಾನಾನ್ಯರು ಆಟಾದ್ ಕಣದಲ್ಲಿ ನಡೆದ ಶೋಕಾಚರಣೆಯನ್ನು ನೋಡಿ, “ಈಜಿಪ್ಟಿನವರಿಗೆ ಒದಗಿ ಇರುವ ಈ ಶೋಕ ಬಹು ವಿಶೇಷವಾದುದು!” ಎಂದರು. ಈ ಕಾರಣ ಜೋರ್ಡನ್ ನದಿಯಾಚೆ ಇರುವ ಆ ಸ್ಥಳಕ್ಕೆ ‘ಆಬೇಲ್ ಮಿಚ್ರಯೀಮ್’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ದೇಶದ ಜನರಾಗಿದ್ದ ಕಾನಾನ್ಯರು ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ - ಐಗುಪ್ತ್ಯರಿಗೆ ಬಂದಿರುವ ಈ ಶೋಕವು ಬಹುವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಆಬೇಲ್‍ಮಿಚ್ರಯೀಮ್ ಎಂದು ಹೆಸರಾಯಿತು. ಇದು ಯೊರ್ದನ್ ಹೊಳೆಯಿಂದ ಆಚೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಾನಾನಿನ ಜನರು ಗೋರೆನ್‌ಅಟಾದ್‌ನಲ್ಲಿ ಶೋಕಿಸುತ್ತಿರುವವರನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆ ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಆ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:11
10 ತಿಳಿವುಗಳ ಹೋಲಿಕೆ  

ಅಬ್ರಹಾಮನು ಅವನಿಗೆ, “ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು,


ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ ಲೆಕ್ಕಕ್ಕೆ ಸರಿಯಾಗಿದ್ದವು. ಯೆಹೋವ ದೇವರ ಮಂಜೂಷವನ್ನಿಟ್ಟ ದೊಡ್ಡ ಬಂಡೆಯು ಇಂದಿನವರೆಗೂ ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಸಾಕ್ಷಿಯಾಗಿದೆ.


ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ.


ಪಿಸ್ಗಾದ ತುದಿಗೆ ಏರಿ, ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ, ಪೂರ್ವಕ್ಕೂ ಕಣ್ಣೆತ್ತಿ ಅದನ್ನು ಕಣ್ಣಾರೆ ನೋಡು. ಈ ಯೊರ್ದನನ್ನು ನೀನು ದಾಟಿ ಹೋಗುವುದಿಲ್ಲ.


ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.


ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.


ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.


ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು