Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:13 - ಕನ್ನಡ ಸಮಕಾಲಿಕ ಅನುವಾದ

13 ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನ ಶವವನ್ನು ಕಾನಾನ್‍ದೇಶಕ್ಕೆ ಹೊತ್ತುಕೊಂಡುಹೋಗಿ ಮಕ್ಪೇಲ ಎಂಬ ಬೈಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂವಿುಸಹಿತ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:13
14 ತಿಳಿವುಗಳ ಹೋಲಿಕೆ  

ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.


ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು, ಅವನ ಅರಮನೆಯ ತೋಟವಾದ ಉಜ್ಜನ ತೋಟದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.


ಇಸಾಕನು ಮುದುಕನಾಗಿಯೂ, ತುಂಬಾ ಆಯುಷ್ಯವುಳ್ಳವನಾಗಿಯೂ ಮರಣಹೊಂದಿ ತನ್ನ ಪಿತೃಗಳೊಂದಿಗೆ ಸೇರಿದನು. ಅವನ ಮಕ್ಕಳಾದ ಏಸಾವನೂ, ಯಾಕೋಬನೂ ಅವನನ್ನು ಸಮಾಧಿಮಾಡಿದರು.


ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.


ಅವನ ಪುತ್ರರಾದ ಇಸಾಕನೂ, ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಳಿಟ್ಟರು.


ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.


ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.


ಯೋಸೇಫನು ತನ್ನ ತಂದೆಯನ್ನು ಹೂಳಿದ ಮೇಲೆ, ತನ್ನ ಸಹೋದರರ ಸಂಗಡವೂ, ತನ್ನ ತಂದೆಯನ್ನು ಹೂಳುವುದಕ್ಕಾಗಿ ಅವನ ಸಂಗಡ ಹೋದವರೆಲ್ಲರೂ ಈಜಿಪ್ಟಿಗೆ ತಿರುಗಿ ಬಂದರು.


ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.


ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿ ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.


ನಾನೇ ನಿನ್ನ ಸಂಗಡ ಈಜಿಪ್ಟಿಗೆ ಹೋಗುವೆನು. ನಾನು ನಿಶ್ಚಯವಾಗಿ ನಿನ್ನನ್ನು ಕಾನಾನಿಗೆ ತಿರುಗಿ ಬರಮಾಡುವೆನು. ಯೋಸೇಫನು ನಿನ್ನ ಅಂತಿಮ ಕಾಲದಲ್ಲಿ ನೀನು ಕಣ್ಣುಮುಚ್ಚುವಾಗ ಇರುವನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು