Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:15 - ಕನ್ನಡ ಸಮಕಾಲಿಕ ಅನುವಾದ

15 ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು - ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ಪೂರಾ ಶಿಕ್ಷೆಯನ್ನು ಕೊಟ್ಟಾನು ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ಯೋಸೇಫನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:15
13 ತಿಳಿವುಗಳ ಹೋಲಿಕೆ  

ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.


ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ಅವರು ತಮ್ಮ ನಡತೆಯಿಂದಲೇ ನಿಯಮವು ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಾಕ್ಷಿಕೊಡುತ್ತದೆ. ಅವರ ಯೋಚನೆಗಳು ಒಂದಕ್ಕೊಂದು ಇದು ತಪ್ಪು ಅಥವಾ ತಪ್ಪಲ್ಲ ಎಂಬುದನ್ನು ಸೂಚಿಸುತ್ತವೆ.


ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.


ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.


ಯೋಸೇಫನು ತನ್ನ ತಂದೆಯನ್ನು ಹೂಳಿದ ಮೇಲೆ, ತನ್ನ ಸಹೋದರರ ಸಂಗಡವೂ, ತನ್ನ ತಂದೆಯನ್ನು ಹೂಳುವುದಕ್ಕಾಗಿ ಅವನ ಸಂಗಡ ಹೋದವರೆಲ್ಲರೂ ಈಜಿಪ್ಟಿಗೆ ತಿರುಗಿ ಬಂದರು.


ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ, “ನಿನ್ನ ತಂದೆಯು ಮರಣ ಹೊಂದುವುದಕ್ಕಿಂತ ಮುಂಚೆ,


ಅವರು ದೂರದಿಂದ ಅವನನ್ನು ನೋಡಿದಾಗ, ಅವನು ಸಮೀಪಕ್ಕೆ ಬರುವ ಮುಂಚೆಯೇ ಅವನನ್ನು ಕೊಂದುಹಾಕಬೇಕೆಂದು ಅವನಿಗೆ ವಿರೋಧವಾಗಿ ಒಳಸಂಚು ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು