ಆದಿಕಾಂಡ 50:17 - ಕನ್ನಡ ಸಮಕಾಲಿಕ ಅನುವಾದ17 ‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು, ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀವು ಯೋಸೇಫನಿಗೆ, ಈ ಸಂದೇಶವನ್ನು ಕೊಡಬೇಕು, ‘ನಾವು ಮಾಡಿದ್ದು ಕೆಟ್ಟಕಾರ್ಯವೇ ನಿಜ. ಅದಕ್ಕಾಗಿ ನೀನು ಅವರನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.’ ಆದ್ದರಿಂದ ನಾವು ಮಾಡಿದ ಕೆಟ್ಟಕಾರ್ಯಕ್ಕಾಗಿ ನೀನು ನಮ್ಮನ್ನು ಕ್ಷಮಿಸಬೇಕು. ನಾವು ನಿನ್ನ ತಂದೆಯ ದೇವರಿಗೆ ಸೇವಕರಾಗಿದ್ದೇವೆ” ಎಂದು ಹೇಳಿದರು. ಈ ವಿಷಯಗಳನ್ನು ಕೇಳಿ ಅವನು ದುಃಖದಿಂದ ಅತ್ತನು. ಅಧ್ಯಾಯವನ್ನು ನೋಡಿ |