Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:18 - ಕನ್ನಡ ಸಮಕಾಲಿಕ ಅನುವಾದ

18 ಆಮೇಲೆ ಅವನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದು, “ನಿನ್ನ ದಾಸರಾಗಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ, ನಾವು ನಿನಗೆ ಗುಲಾಮರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು - ಇಗೋ, ನಾವು ನಿನಗೆ ಗುಲಾಮರು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, “ನಾವು ನಿನ್ನ ಸೇವಕರಾಗಿದ್ದೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:18
8 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.


ಯೆಹೂದನೂ ಅವನ ಸಹೋದರರೂ ಯೋಸೇಫನು ಇನ್ನೂ ಮನೆಯಲ್ಲಿದ್ದಾಗಲೇ, ಅವನ ಮನೆಗೆ ಬಂದು ಮುಂದೆ ಅಡ್ಡಬಿದ್ದರು.


ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.


ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”


ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.


‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.


ಯೋಸೇಫನು ಅವರಿಗೆ, “ಭಯಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು