Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:19 - ಕನ್ನಡ ಸಮಕಾಲಿಕ ಅನುವಾದ

19 ಯೋಸೇಫನು ಅವರಿಗೆ, “ಭಯಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ಜೋಸೆಪನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೋಸೇಫನು ಅವರಿಗೆ - ಹೆದರಬೇಡಿರಿ; ನಾನೇನು ದೇವರ ಪ್ರತಿನಿಧಿಯೇ? ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದ್ದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಯೋಸೇಫನು ಅವರಿಗೆ, “ಭಯಪಡಬೇಡಿ. ನಾನು ದೇವರಲ್ಲ; ನಿಮ್ಮನ್ನು ಶಿಕ್ಷಿಸಲು ನನಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:19
11 ತಿಳಿವುಗಳ ಹೋಲಿಕೆ  

ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.


ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.


ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆನು,” ಎಂದು ಹೇಳಿದ ಕರ್ತದೇವರನ್ನು ನಾವು ಬಲ್ಲೆವು. ಇದಲ್ಲದೆ, “ಕರ್ತದೇವರು ತಮ್ಮ ಜನರಿಗೆ ನ್ಯಾಯತೀರಿಸುವರು,” ಎಂದೂ ಹೇಳಲಾಗಿದೆ.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಆಮೇಲೆ ಅವನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದು, “ನಿನ್ನ ದಾಸರಾಗಿದ್ದೇವೆ,” ಎಂದರು.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು