ಆದಿಕಾಂಡ 50:24 - ಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |