ಆದಿಕಾಂಡ 50:4 - ಕನ್ನಡ ಸಮಕಾಲಿಕ ಅನುವಾದ4 ಅವನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಆಸ್ಥಾನದವರಿಗೆ, “ನಾನು ನಿಮ್ಮ ಕಣ್ಣುಗಳ ಮುಂದೆ ದಯೆ ಹೊಂದಿದ್ದೇಯಾದರೆ, ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುಃಖದ ದಿನಗಳು ಕಳೆದ ನಂತರ ಜೋಸೆಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4-5 ಗೋಳಾಡುವ ದಿನಗಳು ಮುಗಿದನಂತರ ಯೋಸೇಫನು ಫರೋಹನ ಮನೆಯವರ ಬಳಿಗೆ ಹೋಗಿ - ನನ್ನ ತಂದೆಯು ತಾನು ಕಾನಾನ್‍ದೇಶದಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿಮಾಡಬೇಕೆಂದು ಸಾಯುವದಕ್ಕಿಂತ ಮೊದಲು ನನ್ನಿಂದ ಪ್ರಮಾಣಮಾಡಿಸಿದನು. ಆದದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿಮಾಡಿ ಬರುವದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಎಪ್ಪತ್ತು ದಿನಗಳಾದ ಮೇಲೆ ಯೋಸೇಫನು ಫರೋಹನ ಅಧಿಕಾರಿಗಳಿಗೆ, “ದಯವಿಟ್ಟು ಇದನ್ನು ಫರೋಹನಿಗೆ ತಿಳಿಸಿರಿ. ಅಧ್ಯಾಯವನ್ನು ನೋಡಿ |